ರಕ್ಷಾಬಂಧನದಂದು ಗೃಹಿಣಿಯರಿಗೆ ಕೇಂದ್ರದಿಂದ ಭರ್ಜರಿ ಉಡುಗೊರೆ: ಗ್ಯಾಸ್ ಸಿಲಿಂಡರ್ ಬೆಲೆ 200ರೂ ಇಳಿಕೆ
ನವದೆಹಲಿ: ಕೇಂದ್ರ ಸರ್ಕಾರವು ಮಂಗಳವಾರ ಗೃಹಬಳಕೆಯ ಅಡುಗೆ ಅನಿಲ (LPG) ದ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 200 ರೂ. ಇಳಿಕೆ ಮಾಡಿ ಗೃಹಿಣಿಯರಿಗೆ ರಕ್ಷಾಬಂಧನದ ಉಡುಗೊರೆ ನೀಡಿದೆ. ಬುಧವಾರದಿಂದ ಜಾರಿಗೆ ಬರಲಿರುವ ಈ ನಿರ್ಧಾರವು ದ್ರವೀಕೃತ ಪೆಟ್ರೋಲಿಯಂ ಅನಿಲದ (ಎಲ್ಪಿಜಿ) ಎಲ್ಲಾ 33 ಕೋಟಿ ದೇಶೀಯ ಗ್ರಾಹಕರಿಗೆ ಪ್ರಯೋಜನವಾಗಲಿದೆ. ಉಜ್ವಲ ಯೋಜನೆಯಡಿ ಒಳಪಡುವ ಸುಮಾರು 10 ಕೋಟಿ ಬಡ ಕುಟುಂಬಗಳಿಗೆ, ಪ್ರತಿ ಸಿಲಿಂಡರ್ಗೆ 200 ರೂ.ಗಳ ಸಬ್ಸಿಡಿಗೆ ಹೆಚ್ಚುವರಿಯಾಗಿ ಬೆಲೆ ಕಡಿತಗೊಳಿಸಲಾಗಿದ್ದು, ಇದರ ಪರಿಣಾಮವಾಗಿ ಪ್ರತಿ ಸಿಲಿಂಡರ್ಗೆ […]
19 ಕೆ.ಜಿಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ 83 ರೂಪಾಯಿಗಳಷ್ಟು ಕಡಿತ
ನವದೆಹಲಿ: ಇಂಡಿಯನ್ ಆಯಿಲ್ 19 ಕೆ.ಜಿಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಸುಮಾರು 83 ರೂಪಾಯಿಗಳಷ್ಟು ಕಡಿತಗೊಳಿಸಿದೆ. ತನ್ನ ವೆಬ್ಸೈಟ್ನಲ್ಲಿ ಸುದ್ದಿಯನ್ನು ಪ್ರಕಟಿಸಿದ ತೈಲ ಮಾರುಕಟ್ಟೆ ಕಂಪನಿಯು ಹೊಸ ಬೆಲೆಗಳು ಜೂನ್ 1 ರಿಂದ ಅನ್ವಯವಾಗಲಿದೆ ಎಂದು ಹೇಳಿದೆ. ಆದಾಗ್ಯೂ ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅದೇ ರೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ವರ್ಷ ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ಅಂತರಾಷ್ಟ್ರೀಯ ತೈಲ ಬೆಲೆಗಳು ಏರಿದಾಗ […]
ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ 171.50 ರೂ ಕಡಿತ; ಗೃಹಬಳಕೆ ಯಥಾಸ್ಥಿತಿ
ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಕಡಿತಗೊಳಿಸಿವೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು 171.50 ರೂ ಕಡಿತಗೊಳಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಆದಾಗ್ಯೂ, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಯಥಾಸ್ಥಿತಿಯಲ್ಲಿದೆ. ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ನ ಚಿಲ್ಲರೆ ಮಾರಾಟದ ಬೆಲೆ ಈಗ 1,856.50 ರೂ ಆಗಿದ್ದರೆ, ಮುಂಬೈನಲ್ಲಿ 1,808 ರೂ, ಕೋಲ್ಕತ್ತಾದಲ್ಲಿ1,960.50 ರೂ ಹಾಗೂ […]
ತಿಂಗಳ ಮೊದಲ ದಿನವೆ ಅಡುಗೆ ಅನಿಲ ಬೆಲೆ ಏರಿಕೆಯ ಉಡುಗೊರೆ ನೀಡಿದ ಸರ್ಕಾರ: ರಮೇಶ್ ಕಾಂಚನ್
ಉಡುಪಿ: ತಿಂಗಳ ಮೊದಲ ದಿನವೇ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏಕಾಏಕಿ ರೂ.50 ಏರಿಸುವ ಮೂಲಕ ಜನಸಾಮಾನ್ಯರಿಗೆ ಗಿಫ್ಟ್ ನೀಡುವ ಮೂಲಕ ಶಾಕ್ ನೀಡಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ದೇಶದ ಜನತೆ ಮತ್ತೊಮ್ಮೆ ಮೋದಿ ಸರಕಾರದ ಜನವಿರೋಧಿ ಬೆಲೆ ಏರಿಕೆಯಿಂದ ತತ್ತರಿಸುವಂತಾಗಿದೆ. ಸದಾ ಉದ್ಯಮಿಗಳ ಪರ ನಿಲ್ಲುವ ಬಿಜೆಪಿ ಸರಕಾರ ಎಂದಿಗೂ ಕೂಡ ಬಡ ಹಾಗೂ ಮಧ್ಯಮ ವರ್ಗದವರ ಕಷ್ಟಕ್ಕೆ […]
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ
ಉಡುಪಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕೊಡವೂರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಯೊಂದು ಸವಲತ್ತು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರತೀ ತಿಂಗಳಿಗೊಮ್ಮೆ ಮಾಹಿತಿ ಕಾರ್ಯಕ್ರಮವನ್ನು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಲಾಯಿತು. ಮುಂದಿನ ದಿನಗಳಲ್ಲಿಯೂ ಇಂತಹ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದರು. ಈ ಸಂದರ್ಭದಲ್ಲಿ ಮಿತೇಶ್ […]