ಕುದಿ ಗ್ರಾಮದ ಗ್ಯಾಸ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ, ತಕ್ಷಣ ಕಾರ್ಯಾಚರಣೆ, ತಪ್ಪಿದ ಭಾರೀ ಅನಾಹುತ: ಇದು ರಾಸಾಯನಿಕ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ
ಉಡುಪಿ: ಉಡುಪಿ ತಾಲೂಕಿನ ಕುದಿ ಗ್ರಾಮದ ಜನತೆಗೆ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ತೀವ್ರ ಉಸಿರಾಟದ ತೊಂದರೆ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದ್ದರಿಂದ ಸಾರ್ವಜನಿಕರು ತೀವ್ರ ಆತಂಕದಲ್ಲಿದ್ದರು, ಗ್ರಾಮದಲ್ಲಿದ್ದ ಎ.ಜಿ.ಎಸ್. ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಸಂಭವಿಸಿದ ಅನಿಲ ಸೋರಿಕೆಯಿಂದಾಗಿ ಈ ಘಟನೆ ಸಂಭವಿಸಿತ್ತು. ಇಂದು ಬೆಳಗ್ಗೆ 8.50 ಕ್ಕೆ ಕುದಿ ಗ್ರಾಮದಲ್ಲಿರುವ ಎ.ಜಿ.ಎಸ್ ಎಲ್‌ಪಿಜಿ ಇಂಡಸ್ಟ್ರಿಯಲ್ಲಿ ಅನಿಲ ಸೋರಿಕೆ ಕಂಡು ಬಂದಿದ್ದು, ತಕ್ಷಣವೇ ಅಲ್ಲಿನ ಸಿಬ್ಬಂದಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಉಚಿತ ದೂರವಾಣಿ ಸಂಖ್ಯೆ 1077 ಗೆ ಘಟನೆ […]