ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ ಹೆಚ್ಚಳ

ಉಡುಪಿ: ಭಾರತದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು (ಒಎಂಸಿ) ತಲಾ 50 ರೂಪಾಯಿಗಳಷ್ಟು ಹೆಚ್ಚಿಸಿವೆ. ಸಬ್ಸಿಡಿ ರಹಿತ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೂ1,066 ಮತ್ತು ಉಡುಪಿ ಜಿಲ್ಲೆಯಲ್ಲಿ ರೂ 1,060.50 ಆಗಿದೆ. ಇದಕ್ಕೂ ಮೊದಲು, ದೇಶೀಯ ಎಲ್‌ಪಿಜಿ ಬೆಲೆಗಳನ್ನು ಮೇ 19 ರಂದು ಕೊನೆಯ ಬಾರಿಗೆ ಪರಿಷ್ಕರಿಸಲಾಗಿದ್ದು, ಪ್ರತಿ ಸಿಲಿಂಡರ್‌ಗೆ 3.50 ರೂ. ಹೆಚ್ಚಿಸಲಾಗಿತ್ತು. ಸಾಮಾನ್ಯವಾಗಿ, ಎಲ್‌ಪಿಜಿ ಸಿಲಿಂಡರ್ ಬೆಲೆಗಳನ್ನು ಪ್ರತಿ ತಿಂಗಳ […]

ಜೂನ್ 1 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 135 ರೂ ಕಡಿತ: ಗೃಹಬಳಕೆಯ ಸಿಲಿಂಡರ್ ಬೆಲೆ ಯಥಾಸ್ಥಿತಿ

ನವದೆಹಲಿ: ಜೂನ್ 1 ರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 135 ರೂ ಕಡಿತ ಮಾಡಲಾಗಿದೆ. ಬುಧವಾರ ಬೆಳಗ್ಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 135 ರೂ ನಷ್ಟು ಇಳಿಕೆಮಾಡಲಾಗಿದೆ. ಮೂರು ತಿಂಗಳ ಸತತ ಏರಿಕೆಯ ನಂತರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇದು ಮೊದಲನೆ ಇಳಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ ಈಗ ದೆಹಲಿಯಲ್ಲಿ 2,219 ರೂ., ಕೋಲ್ಕತ್ತಾದಲ್ಲಿ 2,322 ರೂ., ಮುಂಬೈನಲ್ಲಿ 2,171.50 ರೂ., ಮತ್ತು ಚೆನ್ನೈನಲ್ಲಿ […]

ಗ್ರಾಹಕರ ಕಿಸೆ ಸುಡುತ್ತಿದೆ ಅಡುಗೆ ಅನಿಲ: 1000 ರೂ ಗಡಿ ದಾಟಿದ ಎಲ್‌ಪಿಜಿ ಸಿಲಿಂಡರ್ ಬೆಲೆ

ಬೆಂಗಳೂರು: ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಗಳು ಏರಿಕೆಯಾಗಿದ್ದು, ಮೇ ತಿಂಗಳಲ್ಲಿ ಇದು ಎರಡನೇ ಏರಿಕೆಯಾಗಿದೆ. ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಈ ತಿಂಗಳಲ್ಲಿ ಎರಡನೇ ಬಾರಿಗೆ ಮತ್ತೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಬೆಲೆ ಪ್ರತಿ ಸಿಲಿಂಡರ್‌ಗೆ 3.50 ರೂಪಾಯಿ ಏರಿಕೆಯಾಗಿದ್ದು, ಗುರುವಾರ ವಾಣಿಜ್ಯ ಸಿಲಿಂಡರ್‌ನ ಬೆಲೆ 8 ರೂಪಾಯಿ ಏರಿಕೆಯಾಗಿದೆ. ಈ ಹೆಚ್ಚಳದೊಂದಿಗೆ ದೇಶದಾದ್ಯಂತ ಎಲ್ಲಾ ನಗರಗಳಲ್ಲಿ ಎಲ್‌ಪಿಜಿ ಬೆಲೆ 1000 ರೂ ಗಡಿ ದಾಟಲಿದೆ.

ಹೊಸ ವರ್ಷಕ್ಕೆ – ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

ನವದೆಹಲಿ: ಗೃಹ ಬಳಕೆ ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ದರ ರೂ.5.91 ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುವ ಮೂಲಕ ಜನರಿಗೆ ಹೊಸ ವರ್ಷಕ್ಕೆ ಗಿಫ್ಟ್ ಸಿಕ್ಕಿದಂತಾಗಿದೆ. ಡಿಸೆಂಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು 2ನೇ ಬಾರಿ ಇಳಿಕೆ ಮಾಡಿದ್ದು, ಡಿ.1 ರಂದು ರೂ.6.52 ಕಡಿತಗೊಳಿಸಿತ್ತು. ಇದರೊಂದಿಗೆ ರೂ.12.43 ಒಂದೇ ತಿಂಗಳಿನಲ್ಲಿ ಕಡಿಮೆ ಆಗಿದೆ. ಜೂನ್ ನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ತಿಂಗಳಿನಿಂದ ಸತತ 6 ಬಾರಿ ರೂ.14.13 ಹೆಚ್ಚಳವಾಗಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‍ಪಿಜಿ ಅನಿಲದ ಬೆಲೆ […]