ದಶಕಗಳ ಬಳಿಕ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಲೈಮ್ ಡಿಸೀಸ್: ಬ್ಯಾಕ್ಟೀರಿಯಾದಿಂದ ಹರಡುವ ರೋಗದ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ

ತಿರುವನಂತಪುರ: ಬರೋಬ್ಬರಿ ಹತ್ತು ವರ್ಷದ ಬಳಿಕ ಕೇರಳ ರಾಜ್ಯದ ಎರ್ನಾಕುಳಂನಲ್ಲಿ ಲೈಮ್ ಡಿಸೀಸ್ (Lyme Disease) ಪತ್ತೆಯಾಗಿದೆ. ಅತ್ಯಂತ ಅಪರೂಪದ ಈ ಕಾಯಿಲೆ ಬೊರೆಲಿಯಾ ಬರ್ಗ್‌ಡೋರ್‍ಫೆರಿ ಎಂಬ ಬ್ಯಾಕ್ಟೀರಿಯಾ ಮೂಲಕ ಹರಡುತ್ತಿದ್ದು, ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 56 ವರ್ಷದ ವ್ಯಕ್ತಿಯೊಬ್ಬರಲ್ಲಿ ಈ ರೋಗವನ್ನು ವೈದ್ಯರು ದೃಢಪಡಿಸಿದ್ದಾರೆ. ತೀವ್ರ ರೀತಿಯ ಜ್ವರ, ಮೊಣಕಾಲಿನ ಊತದಿಂದ ಡಿಸೆಂಬರ್ ತಿಂಗಳಿನಲ್ಲಿ ಈ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕದ ದಿನಗಳಲ್ಲಿ ಅವರಿಗೆ ಅಪಸ್ಮಾರದ ಲಕ್ಷಣ ಕಾಣಿಸಿಕೊಂಡಿತ್ತು. ಬಹಳಷ್ಟು ಚಿಕಿತ್ಸೆ ಬಳಿಕವೂ ಗುಣಮುಖವಾಗದ […]