ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿದ ಕಲೆ ಸಾರ್ಥಕ ಜೀವನದ ಸಾಧನ: ಮಧುಬನಿ ಕಲಾವಿದರ ಅಭಿಮತ
ಮಣಿಪಾಲ: ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿ ಕಲೆ ಜನರನ್ನು ಒಂದು ಮಾಡುತ್ತದೆ ಮತ್ತು ಏಕತೆಯ ಸಂದೇಶವನ್ನು ಹರಡುತ್ತದೆ ಎಂದು ಬಿಹಾರದ ಮಧುಬನಿ ಕಲಾವಿದರು ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ವಿದ್ಯಾರ್ಥಿಗಳೊಂದಿಗೆ ಮಧುಬನಿ ಕಲಾವಿದರಾದ ಸರವಣ್ ಕುಮಾರ್ ಪಾಸ್ವಾನ್, ಸಂತೋಷ್ ಕುಮಾರ್ ಪಾಸ್ವಾನ್ ಮತ್ತು ಉಜಾಲಾ ಕುಮಾರಿ ಮಾತನಾಡಿ, ಕಲೆಯು ಸಾರ್ಥಕ ಜೀವನದ ಸಾಧನವಾಗಿದೆ ಎಂದು ಹೇಳಿದರು. ಕಲಾವಿದರು ತಮ್ಮ ಹುಟ್ಟಿನ ಆಧಾರದ ಮೇಲೆ ತಾರತಮ್ಯವನ್ನು ಎದುರಿಸುವುದು ನಿಜವಾದರೂ ಕಲೆ […]