ಮಡಿಕೇರಿ ನಗರಸಭೆ: ಬಿಜೆಪಿಗೆ ಭರ್ಜರಿ ಗೆಲುವು
ಮಡಿಕೇರಿ: ಇಲ್ಲಿನ ನಗರಸಭೆಯ 23 ವಾರ್ಡ್‌ಗೆ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಯು ಭರ್ಜರಿ ಗೆಲುವು ದಾಖಲಿಸಿದೆ. ತಲಾ ಒಂದು ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ಮುಖಭಂಗ ಅನುಭವಿಸಿದೆ. ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಮೈತ್ರಿ ಕೂಟವು ಅಧಿಕಾರದಲ್ಲಿತ್ತು. ಒಟ್ಟು 23 ವಾರ್ಡ್‌ಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು 16 ವಾರ್ಡ್‌ನಲ್ಲಿ ಗೆದ್ದಿದ್ದಾರೆ. ಆ ಮೂಲಕ ನಗರಸಭೆ ಬಿಜೆಪಿ ಪಾಲಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ತಲಾ ಒಂದು ವಾರ್ಡ್‌ನಲ್ಲಿ ಜಯ ಗಳಿಸಿದೆ. ಎಸ್‌ಡಿಪಿಐ ಐದು ವಾರ್ಡ್‌ನಲ್ಲಿ ಗೆದ್ದು […]