ಮಾಚೀದೇವರ ಆದರ್ಶಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮಡಿವಾಳ ಮಾಚೀದೇವ ಅವರ ಆದರ್ಶ, ಆಲೋಚನೆ ಮತ್ತು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಅವರು ಯಾವ ಧ್ಯೇಯಕ್ಕಾಗಿ ಸಮಾಜದಲ್ಲಿ ಶ್ರಮಿಸಿದರು ಎಂದು ನಾವು ಅರಿತುಕೊಳ್ಳಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಡಿವಾಳ ಮಾಚೀದೇವ ಜಯಂತಿ ಕಾರ್ಯಕ್ರಮದಲ್ಲಿ […]