ಗೂಫಿ ಪೈಂಟಲ್ ಮಹಾಭಾರತದ ‘ಶಕುನಿ’ ಪಾತ್ರಧಾರಿ ನಿಧನ
ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಗೂಫಿ ಅವರನ್ನು ವಾರಗಳ ಹಿಂದೆ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಅವರು ಮೃತಪಟ್ಟಿದ್ದಾರೆ. ಅವರ ಸೋದರ ಸಂಬಂಧಿ ಹಿತೇನ್ ಪೈಂತಲ್ ಅವರು ಈ ನೋವಿನ ಸಂಗತಿ ಹಂಚಿಕೊಂಡಿದ್ದಾರೆ. ದುರದೃಷ್ಟವಶಾತ್ ಗೂಫಿ ಇನ್ನಿಲ್ಲ. ಅವರು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾದರು. ಯಾವುದೇ ನೋವಿಲ್ಲದೆ ಅವರು ಮೃತಪಟ್ಟರು’ ಎಂದು ಹಿತೇನ್ ಮಾಹಿತಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಗೂಫಿಗೆ ಅನಾರೋಗ್ಯ ಕೈ ಕೊಟ್ಟ ಬಗ್ಗೆ ವರದಿ ಆಗಿತ್ತು. ಅವರು ಆಸ್ಪತ್ರೆಯಿಂದ […]