ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 17.50 ಕೋ. ರೂ. ಲಾಭ: ಕಾರ್ಯಾಚರಣೆ ರಾಜ್ಯಾದ್ಯಂತ ವಿಸ್ತರಣೆ; ಶ್ರೀಘ್ರದಲ್ಲಿ ಯುಪಿಐ ಸೇವೆ ಲಭ್ಯ
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2023-24ನೇ ಸಾಲಿನಲ್ಲಿ 921 ಕೋ. ರೂ. ವ್ಯವಹಾರ ನಡೆಸಿ 17.50 ಕೋ. ರೂ. ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷ, ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟಿರುವ ಬ್ಯಾಂಕ್ ಅವಿಭಜಿತ ದ.ಕ. ಜಿಲ್ಲೆಯಲ್ಲಿ 8 ಶಾಖೆಗಳನ್ನು ಹೊಂದಿದ್ದು 40 ಸಾವಿರ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ. 2023-24ನೇ ಸಾಲಿನಲ್ಲಿ 532 ಕೋ. ರೂ. ಠೇವಣಿ, 389 ಕೋ. ರೂ. ಸಾಲ ಮತ್ತು […]
ಉಚ್ಚಿಲ ದಸರಾ: ಅ. 22 ರಂದು ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ‘ನಾಡಹಬ್ಬ ದಸರಾ’ ಕುರಿತು ಚಿತ್ರ ಬಿಡಿಸುವ ಸ್ಪರ್ಧೆ
ಉಡುಪಿ: ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ, ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಅ. 22 ರಂದು ಬೆಳಗ್ಗೆ 9.30ಕ್ಕೆ ಉಚ್ಚಿಲ ಮೊಗವೀರ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ. ‘ನಾಡಹಬ್ಬ ದಸರಾ’ ಈ ವಿಷಯದ ಕುರಿತು ಸ್ಪರ್ಧಿಗಳು ಚಿತ್ರ ಬಿಡಿಸಬೇಕಾಗಿದ್ದು, ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಿರಿಯರ ವಿಭಾಗ (1 […]
ಸಾಮಾಜಿಕ ಬದ್ದತೆಯನ್ನು ಹೊಂದಿರುವ ಮಹಾಲಕ್ಷ್ಮೀ ಬ್ಯಾಂಕಿನ ಸಾಧನೆ ಸರ್ವರಿಗೂ ಪ್ರೇರಣೆಯಾಗಲಿ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಉಡುಪಿ: ಆರೋಗ್ಯವಂತ ದೇಹಕ್ಕೆ ರಕ್ತನಾಳಗಳು ಯಾವ ರೀತಿ ಅವಶ್ಯವೋ ಅದೇ ರೀತಿ ಸಮಾಜದಲ್ಲಿ ಸದೃಢ ಆರ್ಥಿಕ ವ್ಯವಸ್ಥೆಯ ನಿರ್ಮಾಣಕ್ಕೆ ನರನಾಡಿಯಂತೆ ಉತ್ತಮ ಬ್ಯಾಂಕಿಂಗ್ ವ್ಯವಸ್ಥೆ ಕೂಡಾ ಅವಶ್ಯ. ಕರಾವಳಿ ಜಿಲ್ಲೆಯಲ್ಲಿ ಶಿಸ್ತುಬದ್ಧ ಕಾರ್ಯವೈಖರಿಯಿಂದ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಿರಂತರ ಪ್ರಗತಿ ದಾಖಲಿಸುತ್ತಿರುವ ಮಹಾಲಕ್ಷ್ಮೀ ಬ್ಯಾಂಕ್ ಸಾಧನೆ ಅಭಿನಂದನಾರ್ಹ ಎಂದು ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ಉಡುಪಿ ಅಜ್ಜರಕಾಡಿನ ಕಲ್ಮಂಜೆ ಟವರ್ಸ್ ನಲ್ಲಿ ಮಹಾಲಕ್ಷ್ಮೀ ಬ್ಯಾಂಕಿನ ವಿಸ್ತರಿತ ಆಡಳಿತ ಕಚೇರಿಯ […]