ಪ್ರಸಕ್ತ ಸಾಲಿನಲ್ಲಿ 16 ಕೋಟಿ ಲಾಭಗಳಿಸಿದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ: ಯಶ್‍ಪಾಲ್ ಸುವರ್ಣ 

ಉಡುಪಿ: ಕರಾವಳಿ ಭಾಗದ ಪ್ರತಿಷ್ಠಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2022-23ನೇ ಸಾಲಿನಲ್ಲಿ ರೂ. 812.19 ಕೋಟಿ ವ್ಯವಹಾರ ನಡೆಸಿ ರೂ. 16 ಕೋಟಿ ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್, ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ 28,000 ಸದಸ್ಯರು ಹಾಗೂ 35,000 ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ. […]