ಮಹಾರಾಷ್ಟ್ರ ಬಿಕ್ಕಟ್ಟು: ಉದ್ಧವ್ ಠಾಕ್ರೆ ರಾಜೀನಾಮೆ, ಎಲ್ಲರ ಚಿತ್ತ ಬಿಜೆಪಿಯತ್ತ

ಮುಂಬಯಿ: ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಗುರುವಾರ, ಜೂನ್ 30 ರಂದು ನಡೆಯಬೇಕಿದ್ದ ಮಹತ್ತರ ಪರೀಕ್ಷೆಗೂ ಮುನ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಠಾಕ್ರೆ ಅಧಿಕಾರದಿಂದ ಕೆಳಗಿಳಿಯುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಚಿತ್ರಣವೇ ಬದಲಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವಯಲು ತಿಳಿಸಿದ್ದಾರೆ. ಶಿವಸೇನೆಯ ಮುಖ್ಯ ಸಚೇತಕ ಸುನೀಲ್ […]