ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ರಾಜೀನಾಮೆ
ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರು ರಾಜೀನಾಮೆ ನೀಡಿದ್ದಾರೆ. ತನ್ನ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ಮಾಡಿರುವ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪಕ್ಕೆ ಸಂಬಂಧಿಸಿದಂತೆ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ಪೂರ್ಣಗೊಳಿಸುವಂತೆ ಬಾಂಬೆ ಹೈಕೋರ್ಟ್ ಇಂದು ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ನಿರ್ದೇಶನ ನೀಡಿದ ಬೆನ್ನಲ್ಲೇ ಸಚಿವ ದೇಶ್‌ಮುಖ್ ರಾಜೀನಾಮೆ ನೀಡಿದ್ದಾರೆ. ಸಚಿವ ದೇಶಮುಖ್ ಅವರು ಮುಂಬೈನಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಸಂಗ್ರಹಿಸುವಂತೆ […]