₹109 ಕೋಟಿ ವೆಚ್ಚದ ಅತ್ಯಾಧುನಿಕ ದರ್ಶನ ಹಾದಿ ಉದ್ಘಾಟನೆ : ಶಿರಡಿ ಸಾಯಿಬಾಬಾಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
![](https://udupixpress.com/wp-content/uploads/2023/10/download-2023-10-26T161932.815.jpeg)
ಅಹ್ಮದ್ನಗರ (ಮಹಾರಾಷ್ಟ್ರ): ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಶಿರಡಿ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿದರು.ಶಿರಡಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಸಾಯಿಬಾಬಾಗೆ ಪೂಜೆ ಸಲ್ಲಿಸಿದರು. ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದ್ದರು.ಈ ಸಂದರ್ಭದಲ್ಲಿ ಸಾಯಿಬಾಬಾ ಸಮಾಧಿಗೆ ಪ್ರಾರ್ಥನೆ ಸಲ್ಲಿಸಿದರು. ಭಕ್ತರ ದರ್ಶನ ಹಾದಿಯ ವಿಶೇಷತೆ: ಪ್ರಧಾನಿ ಮೋದಿ ಉದ್ಘಾಟನೆ […]