ಏಕನಾಥ್ ಶಿಂಧೆಗೆ ‘ಮಹಾ’ ಕಮಾನು: ಶಿವಸೇನೆಗೆ ಬೆಂಬಲ ನೀಡಲಿದೆ ಬಿಜೆಪಿ

ಮುಂಬಯಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ನಂತರ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ, ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾದ ಫಡ್ನವಿಸ್ ಮತ್ತು ಶಿಂಧೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಬಿಜೆಪಿ ಬೆಂಬಲ ನೀಡಲಿದ್ದು, ಶಿಂಧೆ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ 7.30 ಕ್ಕೆ ಪ್ರಮಾಣ ವಚನ ಸ್ವೀಕಾರ ನಡೆಯಲಿದ್ದು, ಶಿಂಧೆ ಜೊತೆಗಿದ್ದ ಶಾಸಕರು […]

ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ: 16 ಭದ್ರತಾ ಸಿಬ್ಬಂದಿ ಹುತಾತ್ಮ

ಮಹಾರಾಷ್ಟ್ರ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಂತೆಯೇ ನಕ್ಸಲರು ನಡೆಸಿದ ಭೀಕರ ದಾಳಿಗೆ 16 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಐಇಡಿ ಬಾಂಬ್ ದಾಳಿ ನಡೆಸಿ ಗುಂಡಿನ ಮಳೆಗೆರೆದ ಪರಿಣಾಮ 16 ಮಂದಿ ಯೋಧರು ಹುತಾತ್ಮರಾದ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ವಾಹನದ ಚಾಲಕ ಸಹ ಮೃತಪಟ್ಟಿದ್ದಾರೆ. ಕುರ್ಕೆಡಾದಿಂದ ಕ್ಷಿಪ್ರ ಕಾರ್ಯಾಚರಣಾ ತಂಡದ 16 ಭದ್ರತಾ ಸಿಬ್ಬಂದಿಯನ್ನು ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಜಂಬೋರ್ಖೇಡಾ ಮತ್ತು ಲೆಂಧಾರಿ ನಡುವೆ ನಕ್ಸಲರು ವಾಹನವನ್ನು ಸ್ಫೋಟಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ […]