ಆಗಸ್ಟ್ 15 ರಂದು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಿದ್ದು, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನದ ಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ […]