ಯುವ ಜನತೆ ಸಂಗೀತದ ಸೂಕ್ಷ್ಮಗಳನ್ನು ತಾಳ್ಮೆಯಿಂದ ಅರಿಯಬೇಕು: ಪಂಡಿತ್ ಮಿಲಿಂದ್ ಚಿತ್ತಾಲ್

ಮಣಿಪಾಲ: ಶಾಸ್ತ್ರೀಯ ಸಂಗೀತದಲ್ಲಿ ಮನಸ್ಸನ್ನು ಶಮನಗೊಳಿಸುವ ಅಂಶಗಳಿವೆ. ಇಂದಿನ ಯುವ ಜನಾಂಗ ಈ ಸಂಗೀತದ ಸೂಕ್ಷ್ಮಗಳನ್ನು ತಾಳ್ಮೆಯಿಂದ ಅರಿಯುವ ಯತ್ನ ಮಾಡಬೇಕು ಎಂದು ಖ್ಯಾತ ಸಂಗೀತಗಾರ ಪಂಡಿತ್ ಮಿಲಿಂದ್ ಚಿತ್ತಾಲ್ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆಂಡ್ ಸೈನ್ಸಸ್ (ಜೆಸಿಪಿಎಎಸ್), ಎಂಐಸಿ, ಎಂಐಟಿ ಯ ಆಶ್ರಯದಲ್ಲಿ ನಡೆದ ಹಿಂದೂಸ್ತಾನಿ ಗಾಯನದ ನಂತರ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. ಆಧುನಿಕ ಸಮಾಜದಲ್ಲಿ ಸೇರಿಕೊಂಡಿರುವ ತೀವ್ರತರವಾದ ವೇಗ ಬದುಕಿನ ನೆಮ್ಮದಿಯನ್ನು ಕದಡುತ್ತದೆ. ಅಂತಹ ಸ್ಥಿತಿಯಲ್ಲಿ ಮುಖ್ಯವಾಗಿ […]

ಮಣಿಪಾಲ: ಆರೋಗ್ಯ ವಿಜ್ಞಾನ ಸಂಶೋಧನೆಯಲ್ಲಿ ಅಂತರಶಿಸ್ತೀಯ ಏಕೀಕರಣ ಕುರಿತು ಸಮಾವೇಶ

ಮಣಿಪಾಲ: ಆರೋಗ್ಯ ವಿಜ್ಞಾನ ಸಂಶೋಧನೆಯ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಸಹಯೋಗವನ್ನು ಬೆಳೆಸುವ ಒಂದು ಭವ್ಯವಾದ ಪ್ರಯತ್ನದಲ್ಲಿ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ ‘ಮಾಹೆ ಹೆಲ್ತ್ ಸೈನ್ಸಸ್ ರಿಸರ್ಚ್ ವರ್ಟಿಕಲ್ಸ್‌ನ ಸಮತಲ ಏಕೀಕರಣ’ ಎಂಬ ವಿಷಯದ ಬಗ್ಗೆ ಒಂದು ದಿನದ ಸಮಾವೇಶ ಜುಲೈ 21ರಂದು ಮಣಿಪಾಲದ ಮಾಹೆ  ಕ್ಯಾಂಪಸ್‌ನಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ  ಆರೋಗ್ಯ ವಿಜ್ಞಾನಗಳ ಸಹ ಉಪಕುಲಪತಿ  ಡಾ. ಶರತ್ ಕುಮಾರ್ ರಾವ್ ಮತ್ತು ಮಾಹೆ […]

ಮಣಿಪಾಲ: ಮಾಹೆಯಲ್ಲಿ ಮಾದಕ ವಸ್ತುಗಳ ಕುರಿತು ಯುವಜನತೆಗಾಗಿ ಕಾರ್ಯಾಗಾರ

ಮಣಿಪಾಲ: ನಗರದ ಕೆಎಂಸಿಯ ಡಾ.ಟಿ.ಎಂ.ಎ.ಪೈ ಆಡಿಟೋರಿಯಂನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ,ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯ ಹಾಗೂ ಮಾಹೆ ಸಹಯೋಗದಲ್ಲಿ ‘ಮಾದಕ ವಸ್ತುಗಳ ಕುರಿತು ಯುವಜನತೆ ಕಾರ್ಯಾಗಾರ’ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ […]

ಮಣಿಪಾಲ: ಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ

ಮಣಿಪಾಲ: ಪ್ರತಿಷ್ಠಿತ ಭಾರತೀಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು ಜುಲೈ 17 ರಂದು ಉದ್ಘಾಟಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಸಮಾರಂಭವನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ನಿರ್ಮಾಣ ಪ್ರಕ್ರಿಯೆಗೆ ಇಂತಹ ಅದ್ಭುತ ಕೊಡುಗೆಗಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಇನ್‌ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿ ಲೆಫ್ಟಿನೆಂಟ್ […]

ಪತ್ರಕರ್ತ ಸತೀಶ್ ಚಪ್ಪರಿಕೆ ಅವರ ‘ಘಾಂದ್ರುಕ್’ ಕಾದಂಬರಿ ಬಿಡುಗಡೆ

ಮಣಿಪಾಲ: ಲೇಖಕ, ಪತ್ರಕರ್ತ ಸತೀಶ್ ಚಪ್ಪರಿಕೆ ಅವರ ‘ಘಾಂದ್ರುಕ್’ ಕಾದಂಬರಿಯನ್ನು ಇತ್ತೀಚೆಗೆ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಬಿಡುಗಡೆ ಮಾಡಲಾಯಿತು. ಕನ್ನಡ ಸಾಹಿತ್ಯ ಲೋಕಕ್ಕೆ ವಿಭಿನ್ನ ಕೊಡುಗೆಯಾಗಿರುವ ಈ ಕಾದಂಬರಿಯು ಕಾರ್ಪೊರೇಟ್ ಜಗತ್ತು ಮತ್ತು ಭೌಗೋಳಿಕ ರಾಜಕೀಯ ಸನ್ನಿವೇಶದೊಂದಿಗೆ ಸಂವಾದಿಸುತ್ತದೆ ಕೃತಿ ಬಿಡುಗಡೆ ಮಾಡಿ ಬರಹಗಾರ ರಾಜಾರಾಮ್ ತಲ್ಲೂರ್ ಹೇಳಿದರು. ಕಾದಂಬರಿಯಲ್ಲಿ ಸಂಬಂಧಗಳ ಪರಿಶೋಧನೆಯೇ ಜೀವನದ ಅಂತಿಮ ಉದ್ದೇಶವಾಗಿದೆ ಎಂದು ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಹೇಳಿದರು. ಕಾದಂಬರಿಯಲ್ಲಿ ಪುರುಷ […]