ಅನ್ನಭಾಗ್ಯ ಅಕ್ಕಿ ರಾಜಕೀಯ; ಕೇಂದ್ರವನ್ನು ಒತ್ತಾಯಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದ ಮಹೇಶ್ ಠಾಕೂರ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಬೊಗಳೆ ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರು ತಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ವಿಫಲಗೊಂಡು, ಇದೀಗ ಅಕ್ಕಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ? ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಉಚಿತ 10 ಕೆ.ಜಿ. […]