ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಬೇಟಿ ಬಚಾವೋ -ಬೇಟಿ ಪಡಾವೋ ಕಾರ್ಯಗಾರ ಉದ್ಘಾಟಣೆ: ಪ್ರಕಾಶ್ ಖಂಡೇರಿ
ಕುಂದಾಪುರ: ಭ್ರೂಣ ಹತ್ಯೆ, ಅತ್ಯಾಚಾರ, ಲೈಂಗಿಕ ಕಿರುಕುಳ ಇವೆಲ್ಲವುಗಳಿಂದ ಮಹಿಳೆಗೆ ಮುಕ್ತಿ ಸಿಕ್ಕಾಗ ಮಾತ್ರ ಸುಭಿಕ್ಷ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಐಎಮ್‍ಎ ಕುಂದಾಪುರ, ಭಂಡಾರ್ಕಾರ್ಸ್ ಕಾಲೇಜಿನ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಬೇಟಿ ಬಚಾವೋ -ಬೇಟಿ ಪಡಾವೋ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಮಹಿಳೆಯರಿಗೆ ಸ್ವಾತಂತ್ರ್ಯವಿತ್ತು. […]