ರಂಗಸ್ಥಳದ ಕಂಬಕ್ಕೆ ತಲೆ ಬಡಿದುಕೊಂಡ ಮಹಿಷಾಸುರ ಪಾತ್ರಧಾರಿ: ಆತಂಕದ ಸ್ಥಿತಿ ನಿರ್ಮಾಣ

ಕುಂದಾಪುರ: ಶ್ರೀ ದೇವೀ ಮಹಾತ್ಮೆ ಯಕ್ಷಗಾನ ನಡೆಯುತ್ತಿದ್ದ ವೇಳೆ ಮಹಿಷಾಸುರ ಪಾತ್ರಧಾರಿ ರಂಗಸ್ಥಳದ ಕಂಬಕ್ಕೆ ತಲೆ ಬಡಿದುಕೊಂಡಿದ್ದರಿಂದ ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣ ಆದ ಘಟನೆ ಕುಂದಾಪುರದ ಚಿತ್ತೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಪೆರ್ಡೂರು ಮೇಳದಿಂದ ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಪ್ರದರ್ಶನಗೊಂಡಿತ್ತು. ಆದರೆ, ಮಹಿಷಾಸುರ ಪಾತ್ರದಲ್ಲಿ ಮಾರಣಕಟ್ಟೆ ಮೇಳದ ಯುವ ಕಲಾವಿದ ನಂದೀಶ್‌ ಮೊಗವೀರ ಜನ್ನಾಡಿ ಅತಿಥಿ ಕಲಾವಿದರಾಗಿ ಭಾಗವಹಿಸಿದ್ದರು. ಇವರು ಮಹಿಷಾಸುರ ವೇಷ ಅಬ್ಬರದ ಪ್ರವೇಶಕ್ಕೆ ಜತೆಗೆ ರಂಗಸ್ಥಳದ ಕಂಬಕ್ಕೆ ತಲೆ ಹೊಡೆದುಕೊಳ್ಳುವ […]