ಮೈತ್ರಿ ಸರಕಾರ ಉರುಳಿಸಿದ್ದೇ ಸಿದ್ದರಾಮಯ್ಯ: ಶೋಭಾ
ಉಡುಪಿ: ಮೈತ್ರಿ ಸರಕಾರದ ಆಂತರಿಕ ಗೊಂದಲ ಬಹಿರಂಗವಾಗಿದ್ದು, ಸಿದ್ದರಾಮಯ್ಯ, ಪರಮೇಶ್ವರ್ ಒಳ ಜಗಳ ಈ ಬೆಳವಣಿಗೆಗೆ ಕಾರಣ. ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರನ್ನು ಎತ್ತಿಕಟ್ಟಿದ್ದಾರೆ. ಸರಕಾರ ಬೀಳೋಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಆನಂದ್ ಸಿಂಗ್ ರಾಜೀನಾಮೆ ಕೊಟ್ಟಾಗಲೇ ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕಿತ್ತು. ಆಂತರಿಕ ಜಗಳ ಹೆಚ್ಚು ಮಾಡಿದ್ದೇ ಸಿದ್ದರಾಮಯ್ಯ ಮೋದಿ ಯಡಿಯೂರಪ್ಪ ಅವರ ಕಡೆ ಕೈ ತೋರಿಸಬೇಡಿ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. […]