ಶಬರಿಮಲೆ ಮಕರವಿಳಕ್ಕು ಯಾತ್ರೆ ಪ್ರಾರಂಭ: ದೇಗುಲ ಯಾತ್ರೆ ಕೈಗೊಂಡ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ತಿರುವನಂತಪುರ: ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಇನ್ನು ಎರಡು ತಿಂಗಳ ಕಾಲ ಶಬರಿಮಲೆ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಏತನ್ಮಧ್ಯೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.