ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ: ಮೀನುಗಾರರು ಮರಳಿ ಬರಲಿ ಎಂದು ಪ್ರಾರ್ಥಿಸಿದ ಕಾರ್ಯಕರ್ತರು

ಕುಂದಾಪುರ: ನಾಪತ್ತೆಯಾಗಿರುವ ಮೀನುಗಾರರು ಸುರಕ್ಷಿತವಾಗಿ ಮರಳಿ ಮನೆಗೆ ಬರುವಂತೆ ಮತ್ತು ಶಬರಿಮಲೆ ಸಂಪ್ರದಾಯ ಉಳಿವಿಗಾಗಿ ಗಂಗೊಳ್ಳಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಊರಿನ ಗ್ರಾಮಸ್ಥರು ಹಾಗೂ ಹಿಂದು ಸಂಘಟನೆಗಳ ಕಾರ್ಯಕರ್ತರು ಗಂಗೊಳ್ಳಿ ಪುರಾಣ ಪ್ರಸಿದ್ಧ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಅಯ್ಯಪ್ಪ ಜ್ಯೋತಿ ಬೆಳಗಿದರು. ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಗ್ರಾಮಸ್ಥರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮೀನುಗಾರಿಕೆಗೆ ತೆರಳಿದ ಮೀನುಗಾರರು ಸುರಕ್ಷಿತವಾಗಿ ಬೋಟು ಸಮೇತ ಮರಳಿ ಮನೆಗೆ ಬರಬೇಕು. […]