ಸುಳ್ಳುಸುದ್ದಿ ತಡೆಯಲು ಸೂಕ್ತ ವ್ಯವಸ್ಥೆ ರೂಪಿಸಿ: ಕೇಂದ್ರಕ್ಕೆ ಖಡಕ್ ಸೂಚನೆ ಕೊಟ್ಟ ಸುಪ್ರೀಂ ಕೋರ್ಟ್

ನವದೆಹಲಿ: ಸುದ್ದಿವಾಹಿನಿಗಳು ಮತ್ತು ಇತರ ಮಾಧ್ಯಮಗಳಲ್ಲಿ ಸುಳ್ಳುಸುದ್ದಿ ಹಬ್ಬಿಸುವುದನ್ನು ನಿಯಂತ್ರಿಸಲು ವ್ಯವಸ್ಥೆ ರೂಪಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ತಬ್ಲೀಗ್‌ ಜಮಾತ್‌ನಿಂದ ಕೋವಿಡ್‌ ಹರಡಿತು ಎಂದು ಕೆಲವು ಸುದ್ದಿವಾಹಿನಿಗಳು ಪ್ರಸಾರ ಮಾಡಿದ್ದ ವರದಿಗಳ ವಿರುದ್ಧ ಜಮಾತ್ ಉಲೇಮಾ ಎ ಹಿಂದ್ ಸಂಘಟನೆಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿಗಳಾಧ ಎ.ಎಸ್‌.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿ ಮಂಗಳವಾರ ಈ ಸೂಚನೆ ನೀಡಿತು. ಸುದ್ದಿವಾಹಿನಿಗಳಲ್ಲಿ ಸುಳ್ಳುಸುದ್ದಿಗಳನ್ನು ತಡೆಯಲು ಕೇಬಲ್ ಟಿವಿ […]