ಯುವ ಶಕ್ತಿಯ ಸದ್ಬಳಕೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜಿಲ್ಲೆಯ ಯುವಕ ಸಂಘಗಳಲ್ಲಿನ ಯುವಕರಿಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮತ್ತು ಅವರಿಗೆ ಅಗತ್ಯ ತರಬೇತಿಗಳನ್ನು ನೀಡುವ ಮೂಲಕ ಅವರಲ್ಲಿರುವ ಯುವಶಕ್ತಿಯನ್ನು ಜಿಲ್ಲೆಯ ಅಭಿವೃಧ್ದಿ ಕಾರ್ಯಗಳಿಗೆ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ನೆಹರು ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆಹರು ಯುವಕೇಂದ್ರದ ಮೂಲಕ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಯುವಕ ಸಂಘಗಳ ಸದಸ್ಯರಿಗೆ ಅವರಲ್ಲಿನ ಸಮಾಜಸೇವೆಯ ಗುಣ, ಕೌಶಲ್ಯ ಮತ್ತು ಸಾಹಸ ಪ್ರವೃತ್ತಿಯನ್ನು ಅಭಿವೃದ್ಧಿಗೊಳಿಸುವಂತೆ […]