ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಮಕ್ಕಳ ಹಬ್ಬ ಸಹಕಾರಿ: ಡಾ. ಕೆ ವಿದ್ಯಾಕುಮಾರಿ
ಉಡುಪಿ: ಮಕ್ಕಳು ಚಟುವಟಿಕೆಗಳ ಆಗರ. ಮಕ್ಕಳ ಬೆಳವಣಿಗೆ ಹಾಗೂ ಅವರುಗಳ ಸರ್ವತೋಮುಖಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸುವ ಸಲುವಾಗಿ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ ಮಹಿಳಾ ಮತ್ತು […]