ಮಲೆಕುಡಿಯ ಸಂಘದ ಕಟ್ಟಡಕ್ಕೆ 2 ಕೋ.ರೂ. ಅನುದಾನ ಬಿಡುಗಡೆ: ವಿ. ಸುನಿಲ್ ಕುಮಾರ್

ಕಾರ್ಕಳ: ಮಲೆಕುಡಿಯ ಸಂಘದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ನಡೆಸಲು ಕಾರ್ಕಳ ತಾಲೂಕಿನ ಮಾಳದಲ್ಲಿ ನಿರ್ಮಾಣ ಆಗಲಿರುವ ಜಿಲ್ಲಾ ಮಲೆಕುಡಿಯ ಸಂಘದ ಕಟ್ಟಡಕ್ಕೆ ಸರಕಾರದ ವತಿಯಿಂದ 2ಕೋ. ರೂ. ಅನುದಾನ ಬಿಡುಗಡೆಗೊಂಡಿದ್ದು, ಮಂಜೂರು ಆದೇಶ ಪ್ರತಿಯನ್ನು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಮಂಜಪ್ಪ ಗೌಡ ಶಾಸಕ ವಿ. ಸುನಿಲ್ ಕುಮಾರ್ ಅವರು ಸಂಘದ ಸಮಾಲೋಚನಾ ಸಭೆಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭ ಶಾಸಕರಾದ ವಿ.ಸುನಿಲ್ ಕುಮಾರ್ ಮಾತನಾಡಿ, ಮಲೆಕುಡಿಯ ಜನಾಂಗದ ಹತ್ತಾರು ಸಮಸ್ಯೆಗಳು ನನ್ನ ಬಳಿ ಬಂದಿದ್ದು, […]