ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ 1 ಲಕ್ಷ ಉಚಿತ ಕೋವಿಡ್ ಲಸಿಕೆ ಕೊಡುಗೆ
ಬೆಂಗಳೂರು: ಕೋವಿಡ್-19 ವಿರುದ್ಧದ ಹೋರಾಟವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯು ಸರ್ಕಾರದ ಕೋವಿಡ್ ಲಸಿಕಾ ಅಭಿಯಾನಕ್ಕೆ 1 ಲಕ್ಷ ಉಚಿತ ಕೋವಿಡ್ ಲಸಿಕೆಗಳನ್ನು ಕೊಡುಗೆಯಾಗಿ ನೀಡಲು ನಿರ್ಧರಿಸಿದೆ. ಈ ಬಗ್ಗೆ ಮಲಬಾರ್ ಗ್ರೂಪ್‌ನ ಅಧ್ಯಕ್ಷ ಎ.ಪಿ. ಅಹ್ಮದ್ ಮಾತನಾಡಿ, ಕೋವಿಡ್-19 ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇಡೀ ದೇಶ ಹೋರಾಟ ಮಾಡುತ್ತಿದೆ. ಈ ಸೋಂಕು ಹರಡುವುದನ್ನು ನಿಯಂತ್ರಿಸಲು ಲಸಿಕಾಕರಣ ಅತ್ಯಂತ ಮುಖ್ಯವಾಗಿದೆ. ಸರ್ಕಾರ ರಾಷ್ಟ್ರವ್ಯಾಪಿ ಕೈಗೊಂಡಿರುವ ಲಸಿಕಾಕರಣ ಅಭಿಯಾನಕ್ಕೆ ಇದು ಸಂಸ್ಥೆಯ […]