ನಿಟ್ಟೆ: ಮಲೇರಿಯಾ ವಿರೋಧಿ ದಿನಾಚರಣೆ

ಉಡುಪಿ, ಜುಲೈ 1: ನಿಟ್ಟೆ ಡಾ.ಎನ್.ಎಸ್.ಎ.ಎಂ ಪ್ರೌಢಶಾಲೆಯಲ್ಲಿ ಮಲೇರಿಯಾ ವಿರೋಧಿ ದಿನಾಚರಣೆ ಜೂನ್ 29 ರಂದು ಜರುಗಿತು. ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಮಲೇರಿಯಾ ಸೊಳ್ಳೆಗಳಿಂದ ಹರುಡುವ ರೋಗವಾಗಿರುವ ಕಾರಣ ಸೊಳ್ಳೆ ಉತ್ಪತ್ತಿಯಾಗುವ ಮೂಲಗಳನ್ನು ಕಂಡು ತಕ್ಷಣವೇ ಲಾರ್ವ ನಾಶ ಮಾಡುವಂತೆ, ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕ್ರಮ ವಹಿಸುವಂತೆ, ಪರಿಸರ ನೈರ್ಮಲ್ಯವನ್ನು ಕಾಪಾಡಿಕೊಂಡು ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ […]

ಮಲೇರಿಯಾ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಅಗತ್ಯ: ಸಿಂಧೂ ರೂಪೇಶ್

ಉಡುಪಿ, ಜೂನ್ 27: ಉಡುಪಿ ಜಿಲ್ಲೆಯಲ್ಲಿ ಇದೀಗ ಮಲೇರಿಯಾವು ನಿಯಂತ್ರಣದಲ್ಲಿದ್ದು, ಮಲೇರಿಯಾ ನಿರ್ಮೂಲನೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜನರ ಸಹಕಾರ ಅಗತ್ಯ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ದಾರೆ. ಅವರು ಗುರುವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಹಾಗೂ ಉಡುಪಿ ನಗರಸಭೆ ಸಹಯೋಗದಲ್ಲಿ  ಹಮ್ಮಿಕೊಂಡಿದ್ದ, ಮಲೇರಿಯಾ ವಿರೋಧಿ ಮಾಸಾಚರಣೆ  ಪ್ರಯುಕ್ತ  , ಬೋರ್ಡ್ ಹೈಸ್ಕೂಲ್ ಆರವಣದಲ್ಲಿ ಏರ್ಪಡಿಸಿದ್ದ  […]