ವಿಂಗ್ ಕಮಾಂಡರ್ ಅಭಿನಂದನ್ ರನ್ನು ಕೃಷ್ಣಮಠಕ್ಕೆ ಕಳುಹಿಸಿಕೊಡುವಂತೆ ರಕ್ಷಣಾ ಸಚಿವರಲ್ಲಿ ಪಲಿಮಾರು ಶ್ರೀ ವಿನಂತಿ
ಉಡುಪಿ: ಉಡುಪಿ ಕೃಷ್ಣಮಠಕ್ಕೆ ಇಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಕೊಟ್ಟು ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ಶ್ರೀಪಾದರನ್ನು ಭೇಟಿ ಮಾಡಿ ಕೆಲಕಾಲ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಕ್ಷಣಾ ಸಚಿವರ ಬಳಿ ಉಡುಪಿಗೆ ಅಭಿನಂದನ್ ವರ್ಧಮಾನ್ ರನ್ನು ಕಳುಹಿಸಿಕೊಡಿ ಎಂದು ಶ್ರೀಪಾದರು ವಿನಂತಿಸಿಕೊಂಡರು. ಅಭಿನಂದನ್ ನನ್ನು ಉಡುಪಿಗೆ ಕಳುಹಿಸಿಕೊಡಿ, ವಿಂಗ್ ಕಮಾಂಡರ್ ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಪಾಕಿಸ್ತಾನದ ನೆಲದಲ್ಲೂ ಎದೆಗುಂದದೆ ದೇಶದ ಗೌರವ ಕಾಪಾಡಿದ್ದಾರೆ. […]