ಮಲ್ಲಿಕಾರ್ಜುನ ಖರ್ಗೆ ಅವರಿಂದ ಪಕ್ಷದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ: ಶಶಿ ತರೂರ್

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರಂತಹ ನಾಯಕರಿಂದ ಪಕ್ಷದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ, ಅವರು ಈಗಿರುವ ಪದ್ಧತಿಯನ್ನೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣಾ ಅಖಾಡಕ್ಕಿಳಿದಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಮ್ಮ ವಾದವನ್ನು ಮಂಡಿಸಿದ ಶಶಿ ತರೂರ್ ತಾವು ಆಯ್ಕೆಯಾದರೆ ಪಕ್ಷದ ಕಾರ್ಯಕರ್ತರ ನಿರೀಕ್ಷೆಗೆ ತಕ್ಕಂತೆ ಬದಲಾವಣೆ ತರುವುದಾಗಿ ಹೇಳಿದ್ದಾರೆ. ನಾವು ಶತ್ರುಗಳಲ್ಲ, ಇದು ಯುದ್ಧವಲ್ಲ. ಇದು ನಮ್ಮ ಪಕ್ಷದ ಭವಿಷ್ಯದ ಸಮೀಕ್ಷೆ. ಕಾಂಗ್ರೆಸ್ ಪಕ್ಷದ ಪ್ರಮುಖ ಮೂವರು ನಾಯಕರಲ್ಲಿ […]