ಮಲ್ಪೆ-ಆಗುಂಬೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಲು ಸೂಕ್ತ ಕ್ರಮ:ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮಲ್ಪೆಯಿಂದ ಆಗುಂಬೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಯ ಕುರಿತಂತೆ ಸ್ವತಹ ತಾನು ಪರಿಶೀಲನೆ ನಡೆಸುತಿದ್ದು, ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿ ಪ್ರಗತಿಯನ್ನು ಅವಲೋಕಿಸುತಿದ್ದೇನೆ. ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಗಿಸುವುದಕ್ಕೆ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿರುವುದಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆಯೊಂದನ್ನು ಪತ್ರಿಕೆಗಳಿಗೆ ಬಿಡುಗಡೆಗೊಳಿಸಿರುವ ಕೋಟ ಶ್ರೀನಿವಾಸ ಪೂಜಾರಿ, ಇಂದ್ರಾಳಿಯ ಮೇಲ್ಸೇತುವೆ ಬಗ್ಗೆ ನಿರಂತರ ಪ್ರತಿಭಟನೆ, ವಿವಿಧ ರೀತಿಯ ಅಣಕಗಳ ನಡುವೆ ಇಲಾಖೆಯ […]