ಮಲ್ಪೆ ಬೀಚ್ ಉತ್ಸವ ಪ್ರಯುಕ್ತ ವಿವಿಧ ಸ್ಪರ್ಧೆಗಳು

ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ವತಿಯಿಂದ ಜನವರಿ 20 ರಿಂದ 22 ರ ವರೆಗೆ ಉಡುಪಿ ರಜತ ಉತ್ಸವದ ಪ್ರಯುಕ್ತ ನಡೆಯುವ ಮಲ್ಪೆ ಬೀಚ್ ಉತ್ಸವ ಕಾರ್ಯಕ್ರಮದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜ. 20 ರಿಂದ 21 ರ ವರೆಗೆ ಗಾಳಿಪಟ ಉತ್ಸವ, ಆರ್ಟ್ ಕ್ಯಾಂಪ್, ಫೋಟೋ ಎಕ್ಸಿಬಿಷನ್, ಫುಡ್ ಫೆಸ್ಟಿವಲ್ ನಡೆಯಲಿದ್ದು, ಜ. 21 ಮತ್ತು 22 ರಂದು ಈಜು ಸ್ಪರ್ಧೆ, ಪುರುಷರ ಕಬಡ್ಡಿ ಸ್ಪರ್ಧೆಗಳು ನಡೆಯಲಿವೆ. […]