ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ
ಉಡುಪಿ : ಮಲ್ಪೆ ಬೀಚ್‍ಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈಗಿರುವ ಐದು ಜನರ ಜೊತೆಗೆ ಹೆಚ್ಚುವರಿ ಐದು ಜೀವರಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮಲ್ಪೆ ಅಭಿವೃದ್ದಿ ಸಮಿತಿ ಸದಸ್ಯರಿಗೆ ಸೂಚಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಮಲ್ಪೆ ಅಭಿವೃದ್ದಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಲ್ಪೆ ಬೀಚ್ ನೋಡಲು ಬರುವ ಪ್ರವಾಸಿಗರ ಸುರಕ್ಷತೆ ಪ್ರಥಮ ಆದ್ಯತೆಯಾಗಿರುವುದರಿಂದ ಈಗಿರುವ ಐದು ಜನ ಜೀವರಕ್ಷಕರ ಜೊತೆಗೆ ಹೆಚ್ಚುವರಿಯಾಗಿ ಇನ್ನೂ ಐದು ಜನರನ್ನು ನೇಮಕ ಮಾಡುವಂತೆ ಸೂಚಿಸಿದ […]