ಮಲ್ಪೆ: ಮೀನುಗಾರಿಕೆ ವೇಳೆ ಎದೆನೋವು- ಮೀನುಗಾರ ಮೃತ್ಯು.

ಮಲ್ಪೆ: ಮಲ್ಪೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಎದೆನೋವಿನಿಂದ ಮೃತಪಟ್ಟ ಘಟಣೆ ನಡೆದಿದೆ. ಮೃತಪಟ್ಟ ವ್ಯಕ್ತಿ ಗಣೇಶನ್‌ (64). ಇವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಆ.10ರಂದು ಮೀನುಗಾರಿಕೆಗೆ ತೆರಳಿದ್ದರು. ಆ.10ರಂದು ಬೆಳಗ್ಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತತ್‌ಕ್ಷಣ ಅವರನ್ನು ಮಲ್ಪೆ ಬಂದರಿಗೆ ತಂದು ಅಲ್ಲಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು ಗಣೇಶನ್‌ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.