ಮಲ್ಪೆ: ಮೇ 16ರಿಂದ ಸೆ. 15ರ ವರೆಗೆ ಪ್ರವಾಸಿ ಬೋಟ್ ಚಟುವಟಿಕೆ ಸ್ಥಗಿತ
ಮಲ್ಪೆ: ಮಳೆಗಾಲದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀ ವಾಕ್ ಪ್ರದೇಶಗಳಲ್ಲಿ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಮೇ 16ರಿಂದ ಸೆ. 15ರ ವರೆಗೆ ಸ್ಥಗಿತಗೊಳಿಸಲಾಗಿದ್ದು, ಜಲಸಾಹಸ ಕ್ರೀಡಾ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿಗಳ ಪ್ರಕಟನೆ ತಿಳಿಸಿದೆ.
ಮಲ್ಪೆ ಬೀಚ್, ಸೈಂಟ್ ಮೇರೀಸ್ ದ್ವೀಪಕ್ಕೆ ಬರುವ ಪ್ರವಾಸಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಉಡುಪಿ: ಮಲ್ಪೆ ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ದೇಶ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಬೀಚ್‌ನಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಈಗಾಗಲೇ ರಚಿಸಲಾದ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಧ್ಯಯನ ಮಾಡಿ, ಮಲ್ಪೆ ಬೀಚ್‌ನಲ್ಲಿ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಎಸ್.ಓ.ಪಿ ರಚಿಸಿ, ಅದರಂತೆ ಬೀಚ್ ಉಸ್ತುವಾರಿ ವಹಿಸಿಕೊಂಡಿರುವವರು ಮತ್ತು ಜೀವ ರಕ್ಷಕರು ಕಾರ್ಯನಿರ್ವಹಿಸುವುದರ ಮೂಲಕ ಪ್ರವಾಸಿಗರು ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ತಮ್ಮ ಪ್ರವಾಸಿ ಕ್ಷಣಗಳನ್ನು ಆನಂದಿಸಲು ವ್ಯವಸ್ಥೆ ಮಾಡಬೇಕು ಜಿಲ್ಲಾಧಿಕಾರಿ […]