ಮಲ್ಪೆ ಮೀನುಗಾರರ ಸಂಘದ ವತಿಯಿಂದ ಸಮುದ್ರ ಪೂಜೆ
ಮಲ್ಪೆ: ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಇಂದು ಮಲ್ಪೆಯ ಕಡಲ ತೀರದಲ್ಲಿ ಸಮುದ್ರ ಪೂಜೆ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ ಹಾಗೂ ಮೀನುಗಾರ ಸಂಘದ ಮುಖಂಡರು ಉಪಸ್ಥಿತರಿದ್ದರು.