ಮಲ್ಪೆಯಲ್ಲಿ ಮಹಿಳೆಗೆ ಹಲ್ಲೆ ಪ್ರಕರಣ: ಮಾ.22 ರಂದು ಮೀನುಗಾರಿಕೆ ಸ್ಥಗಿತಗೊಳಿಸಿ ಪ್ರತಿಭಟನೆ

ಉಡುಪಿ: ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಯಿಂದ ಆದ ಬೆಳವಣಿಗೆಯಿಂದ ಮೀನುಗಾರರು ಹಾಗೂ ಸಮುದಾಯಕ್ಕೆ ಕಳಂಕ ಬರುವಂತಾಗಿದೆ. ಈ ಹಿನ್ನೆಲೆಯಲ್ಲಿ ಮಾ.22ರಂದು ಬೆಳಿಗ್ಗೆಯಿಂದ ಸ್ವ ಇಚ್ಛೆಯಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಸಮಸ್ತ ಮೀನುಗಾರರಿಂದ ಪ್ರತಿಭಟನೆ ನಡೆಯಲಿದೆ ಎಂದು ಮಲ್ಪೆ ಮೀನುಗಾರರ ಸಂಘ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಅವರು, ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ […]