ಮಲ್ಪೆ: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ

ಉಡುಪಿ: ಅಪ್ರಾಪ್ತ ಪ್ರಾಯದ ಇರ್ವರು ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ಶುಕ್ರವಾರ ನಡೆದಿದೆ. ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ. ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ.