ಮಲ್ಪೆ: ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆ ಬೇಲಿ ನಿರ್ಮಾಣ

ಮಲ್ಪೆ: ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಯಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿರುವ ಮಲ್ಪೆ ಕಡಲ ತೀರದಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತಡೆ ಬೇಲಿ ನಿರ್ಮಿಸಲಾಗಿದೆ. ಈ ಮೂಲಕ ಮುಂದಿನ ಮೂರು ತಿಂಗಳು ಪ್ರವಾಸಿಗರು ನೀರಿಗೆ ಇಳಿದು ಮೋಜು, ಮಸ್ತಿ ಮಾಡದಂತೆ ಕ್ರಮ ವಹಿಸಲಾಗಿದೆ. ಪ್ರಸ್ತುತ ಮಲ್ಪೆ ಕಡಲತೀರದಲ್ಲಿ ಅಲೆಗಳ ಅಬ್ಬರ ಬಿರುಸುಗೊಂಡಿದ್ದು, ಪ್ರವಾಸಿಗರ ಸುರಕ್ಷತೆಯ ದೃಷ್ಠಿ ಯಿಂದ ಸಮುದ್ರದ ನೀರಿಗೆ ಇಳಿಯುವುದನ್ನು ನಿಷೇಧಿಸಲಾಗಿದೆ. ಆ ಕಾರಣದಿಂದ ಪ್ರವಾಸಿಗರು ನೀರಿಗೆ ಇಳಿಯುವುದಕ್ಕೆ ಕಡಿವಾಣ ಹಾಕಲು […]