ಮಲ್ಪೆ ಸೇಂಟ್ ಮೇರಿಸ್ ದ್ವೀಪದಲ್ಲಿ ಗುಂಡು ಪಾರ್ಟಿ: ಬೀಚ್ ಅಭಿವೃದ್ಧಿ ಸಮಿತಿಯ ನಿರ್ವಾಹಕ ಸುದೇಶ್ ಶೆಟ್ಟಿ ಸಹಿತ ಏಳು ಮಂದಿ ಪೊಲೀಸ್ ವಶ

ಉಡುಪಿ: ಇಲ್ಲಿನ ಮಲ್ಪೆ ಸೇಂಟ್  ಮೇರಿಸ್ ದ್ವೀಪದಲ್ಲಿ ರಾತ್ರಿ ಗುಂಡು ಪಾರ್ಟಿ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ನಿರ್ವಾಹಕ ಸುದೇಶ್ ಶೆಟ್ಟಿ ಸಹಿತ ಏಳು ಮಂದಿಯನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಮಲ್ಪೆ ಕಡಲತೀರದಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಸೇಂಟ್ ಮೇರಿಸ್ ದ್ವೀಪದಲ್ಲಿ ಶನಿವಾರ ರಾತ್ರಿ 9.30ಕ್ಕೆ ದೀಪದ ಬೆಳಕು ಉರಿಯುತ್ತಿರುವುದು ಕಂಡುಬಂದಿದ್ದು, ಆ ದೀಪ ಒಂದೇ ಕಡೆ ಸುಮಾರು ರಾತ್ರಿ 11.30 ರ ವರೆಗೂ ಗೋಚರಿಸಿದೆ. […]