ಮಲ್ಪೆ: ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ.

ಮಲ್ಪೆ: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಕೇರಳ ರಾಜ್ಯದ ಇಡುಕಿ ಜಿಲ್ಲೆಯ ಮರಾಯು ಗ್ರಾಮದ ಆಲಿಫ್ ಇಸ್ಲಾಮ್(21) ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಈ ಹಿಂದೆ 2025ರ ಡಿ.21ರಂದು ಗುಜರಾತ್ ರಾಜ್ಯದ ಹೀರೇಂದ್ರ […]