ಉಡುಪಿ: ಸೈಂಟ್ ಮೇರೀಸ್ ದ್ವೀಪ ಪ್ರಯಾಣ ಆರಂಭ; 4 ತಿಂಗಳ ನಿರ್ಬಂಧ ತೆರವು

ಉಡುಪಿ: ರಾಜ್ಯದ ಪ್ರವಾಸಿಗರ ಆಕರ್ಷಣೆಯ ತಾಣವಾಗಿರುವ ಮಲ್ಪೆ ಸೈಂಟ್ ಮೇರೀಸ್ ದ್ವೀಪಯಾನಕ್ಕೆ ಹೇರಲಾಗಿದ್ದ ಪ್ರವೇಶ ನಿರ್ಬಂಧ ತೆರವುಗೊಂಡಿದ್ದು, ಸೆಪ್ಟೆಂಬರ್ 15ರಿಂದ ಮತ್ತೆ ದ್ವೀಪಯಾನ ಆರಂಭಗೊಂಡಿದೆ. ಮಳೆಗಾಲದಲ್ಲಿ 4 ತಿಂಗಳ ಕಾಲ ಸೈಂಟ್ ಮೇರೀಸ್ ದ್ವೀಪ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ಅದರ ಅವಧಿ ಮುಗಿದಿದೆ. ಮಲ್ಪೆ ಬೀಚ್ ನಿಂದ 4-5 ಕಿ.ಮೀ. ದೂರದಲ್ಲಿರುವ ದ್ವೀಪಕ್ಕೆ ಮಳೆಗಾಲದಲ್ಲಿ ತೆರಳುವುದು ಅಪಾಯಕಾರಿ ಎಂದು ಪ್ರತಿವರ್ಷ ಮೇ 15ರಿಂದ ಸೆಪ್ಟೆಂಬರ್ 14ರ ವರೆಗೆ ಇಲ್ಲಿನ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತದೆ. ಮಲ್ಪೆ […]