ಮಾಜಿ ಸಚಿವ ಪ್ರಮೋದ್ ಮೀನುಗಾರರಿಗೆ ದ್ರೋಹ ಮಾಡಿದ್ದಾರೆ: ಯಶ್ ಪಾಲ್ ಸುವರ್ಣ ಆರೋಪ

ಉಡುಪಿ: ಮೈತ್ರಿ ಅಭ್ಯರ್ಥಿಯಾಗಿರುವ ಪ್ರಮೋದ್‌ ಮಧ್ವರಾಜ್‌ ಅವರು ಹಿಂದೆ ಮೀನುಗಾರ ಸಚಿವರಾಗಿದ್ದ ಸಂದರ್ಭದಲ್ಲಿ ಅವರ ಮೇಲೆ ಮೀನುಗಾರರ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಮೀನುಗಾರರಿಗೆ ಸೌಲಭ್ಯಗಳನ್ನು ನೀಡುವ ಬದಲು ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಜಾರಿಗೊಳಿಸಿದ್ದ ಯೋಜನೆಗಳನ್ನು ಮೀನುಗಾರರಿಂದ ಕಿತ್ತುಕೊಂಡರು. ಮೀನುಗಾರರ ಒಂದೇ ಒಂದು ಬೇಡಿಕೆಯನ್ನು ಈಡೇರಿಸದೆ ಮೀನುಗಾರರಿಗೆ ದ್ರೋಹ ಮಾಡಿದ್ದಾರೆ ಎಂದು ಉಡುಪಿ–ದ.ಕ. ಜಿಲ್ಲಾ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ ಆರೋಪಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ […]

ದ.ಕ–ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌: ನೂತನ ಅಧ್ಯಕ್ಷರಾಗಿ ‘ಯಶ್‌ಪಾಲ್‌ ಸುವರ್ಣ’ ಪುನರಾಯ್ಕೆ

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ನೂತನ ಅಧ್ಯಕ್ಷರಾಗಿ ಸತತ 4ನೇ ಅವಧಿಗೆ ಯಶ್‌ಪಾಲ್‌ ಎ. ಸುವರ್ಣ ಅವರು ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪುರುಷೋತ್ತಮ್‌ ಅಮೀನ್‌ ಉಳ್ಳಾಲ ಅವರು ಪುನರಾಯ್ಕೆಯಾಗಿದ್ದಾರೆ. ಬುಧವಾರ ನಡೆದ ಫೆಡರೇಶನ್‌ನ ಆಡಳಿತ ಮಂಡಳಿಯ ಸಭೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಮಂಗಳೂರಿನ ಲೆಕ್ಕಪರಿಶೋಧನಾ ಉಪನಿರ್ದೇಶಕ ಮಹೇಶ್ವರಪ್ಪ ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಯಶ್‌ಪಾಲ್‌ ಸುವರ್ಣ ಅವರು 2009ರಲ್ಲಿ ಫೆಡರೇಶ್‌ನ ಅಧ್ಯಕ್ಷತೆಯನ್ನು ವಹಿಸಿಕೊಂಡ ಬಳಿಕ ಫೆಡರೇಶನಿನ ಪ್ರಮುಖ ವ್ಯವಹಾರಗಳಾದ ಸಿಗಡಿ ಮಾರಾಟ, ಡೀಸಿಲ್‌ […]

ಮೀನುಗಾರರ ಮನೆಗೆ ಕೇಂದ್ರ ರಕ್ಷಣಾ ಸಚಿವೆ ಭೇಟಿ: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಕಣ್ಣೀರಿಟ್ಟ ಕುಟುಂಬಸ್ಥರು

ಉಡುಪಿ: ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಜೊತೆ ನಿರ್ಮಲಾ ಸೀತಾರಾಮನ್ ಅವರು ಮಲ್ಪೆಯಲ್ಲಿರುವ ಮೀನುಗಾರರ ಮನೆಗೆ ಭೇಟಿ ಕೊಟ್ಟಾಗ ಬಂಧುಗಳ ಕಣ್ಣೀರ ಕಟ್ಟೆ ಒಡೆಯಿತು. ಮೂರು ತಿಂಗಳ ಹಿಂದೆ ಮೀನುಗಾರಿಕೆಗೆ ತೆರಳಿದ ಮೀನುಗಾರರ ಹುಡುಕಾಟ ಇನ್ನೂ ನಡೆಯುತ್ತಲೇ ಇದೆ. ಕುಟುಂಬಸ್ಥರು ಇವತ್ತು ಬರ್ತಾರೆ ನಾಳೆ ಬರ್ತಾರೆ ಎಂದು ಕಾಯುತ್ತಲೇ ಇದ್ದಾರೆ. ಕಾಣೆಯಾದ ಚಂದ್ರಶೇಖರ, ದಾಮೋದರ ಅವರ ಮನೆಗಳಿಗೆ ಭೇಟಿ […]

ಕಣದಿಂದ ಹಿಂದೆ ಸರಿದ ಶೋಭಾ: ಯಶ್ ಪಾಲ್ ಸುವರ್ಣಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಖಚಿತ.?

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸುವ ಕುರಿತಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಜೆಪಿ ಹೈಕಮಾಂಡ್ ಯುವ ಮುಖಂಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹಾಲಿ ಸಂಸದೆ ಹಾಗೂ ಪ್ರಬಲ ಟಿಕೆಟ್ ಆಕಾಂಕ್ಷಿಯೂ ಆಗಿದ್ದ ಶೋಭಾ ಕರಂದ್ಲಾಜೆ ಸ್ಪರ್ಧೆಯಿಂದ ಹಿಂದೆ ಸರಿಯುವ ಎಲ್ಲಾ ಲಕ್ಷಣಗಳು ಕಂಡುಬಂದಿದ್ದು, ಅವರಿಗೆ ಹೈಕಮಾಂಡ್ ರಾಜ್ಯಮಟ್ಟದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯಶ್ […]

ಬೆಳಕು ಮೀನುಗಾರಿಕೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಉಡುಪಿ: ಜಿಲ್ಲೆಯ ಪರ್ಸಿನ್‌ ಮೀನುಗಾರರು ಸರ್ಕಾರಿ ಆದೇಶವನ್ನು ಉಲ್ಲಂಘಿಸಿ, ಅಕ್ರಮ ಬೆಳಕು ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ಮತ್ಸ್ಯ ಸಂಕುಲ ಅವನತಿಯ ಅಂಚಿಗೆ ತಲುಪಿದೆ. ಹಾಗಾಗಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಡೀಪ್‌ ಸೀ ಟ್ರಾಲ್‌ ಬೋಟ್‌ ಅಸೋಸಿಯೇಶನ್‌ ಅಧ್ಯಕ್ಷ ಕಿಶೋರ್‌ ಡಿ. ಸುವರ್ಣ ಆಗ್ರಹಿಸಿದರು. ಅಕ್ರಮ ಬೆಳಕು ಮೀನುಗಾರಿಕೆ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಡೀಪ್‌ ಸೀ ಟ್ರಾಲ್‌ ಬೋಟ್‌ ಅಸೋಸಿಯೇಶನ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಗೆ […]