ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ ಜ.6ರಂದು ಮೀನುಗಾರರಿಂದ ಕರಾವಳಿಯಾದ್ಯಂತ ಪ್ರತಿಭಟನೆ
ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ‘ಸುವರ್ಣ ತ್ರಿಭುಜ’ ಬೋಟ್ ಹಾಗೂ 7 ಮೀನುಗಾರರು ಕಣ್ಮರೆಯಾಗಿ 19 ದಿನಗಳು ಕಳೆದರೂ ಬೋಟ್ ಮತ್ತು ಮೀನುಗಾರರನ್ನು ಪತ್ತೆ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯತೆಯನ್ನು ಖಂಡಿಸಿ ಹಾಗೂ ಪ್ರಕರಣವನ್ನು ಶೀಘ್ರವಾಗಿ ಪತ್ತೆ ಮಾಡುವಂತೆ ಒತ್ತಾಯಿಸಿ ಜ.6ರಂದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮೀನುಗಾರಿಕೆ ಸ್ಥಗಿತಗೊಳಿಸಿ ರಾಷ್ಟ್ರೀಯ ಹೆದ್ದಾರಿ 66 ಅನ್ನು ತಡೆದು ಪ್ರತಿಭಟನೆ ಮಾಡಲು ಮೀನುಗಾರರು ಸಮಾಲೋಚನಾ ಸಭೆಯಲ್ಲಿ ನಿರ್ಧರಿಸಿದ್ದಾರೆ. ಮಲ್ಪೆ ಮೀನುಗಾರರ ಸಂಘ ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ […]
“ಸುವರ್ಣ ತ್ರಿಭುಜ” ಬೋಟ್ ನಾಪತ್ತೆ ಪ್ರಕರಣ, ರಾಜ್ಯ ಸರಕಾರದ ನಿರ್ಲಕ್ಷ್ಯ: ಯಶ್ ಪಾಲ್ ಸುವರ್ಣ
“ಸುವರ್ಣ ತ್ರಿಭುಜ” ಬೋಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ. ಬೋಟ್ ಪತ್ತೆ ಮಾಡಲು ಯಾವುದೇ ತುರ್ತು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ದೂರಿದರು. ಕರಾವಳಿ ಕಾವಲು ಪಡೆಯಲ್ಲಿ ಈಜು ಬರುವ ಹಾಗೂ ಪರಿಣತಿ ಹೊಂದಿದ ಸಿಬ್ಬಂದಿಗಳಲ್ಲಿ. ಅಲ್ಲದೆ ಇಂತಹ ತುರ್ತು ಅವಘಡಗಳು ಸಂಭವಿಸಿದಂತಹ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ಮಾಡಲು ಬೇಕಾದ ಸೂಕ್ತ ವ್ಯವಸ್ಥೆ […]