ಸೈಂಟ್ ಮೇರಿಸ್ ದ್ವೀಪಕ್ಕೆ ಬೋಟ್ ವ್ಯವಸ್ಥೆ ಹೊಸದಾಗಿ ಟೆಂಡರ್: ಜಿಲ್ಲಾಧಿಕಾರಿ
ಉಡುಪಿ, ಜುಲೈ 8: ಸೈಂಟ್ ಮೇರಿಸ್ ಐಲ್ಯಾಂಡ್‍ಗೆ ಮಲ್ಪೆ ಬೀಚ್‍ನಿಂದ ಮತ್ತು ಜೆಟ್ಟಿಯಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ಬೋಟ್‍ಗಳಿಗೆ ನೀಡಿರುವ ಪರವಾನಗಿ ಅವಧಿಯು ಮುಗಿದಿರುವುದರಿಂದ, ಹೊಸದಾಗಿ ಟೆಂಡರ್ ಕರೆಯುವಂತೆ, ಮಲ್ಪೆ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು, ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಮಲ್ಪೆಯಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ಹೋಗಲು, ಬೀಚ್‍ನಿಂದ 4 ಬೋಟ್‍ಗಳು ಮತ್ತು ಜೆಟ್ಟಯಿಂದ 3 ಬೋಟ್‍ಗಳಿಗೆ ಈಗಾಗಲೇ ಅನುಮತಿ […]