ಕೇಂದ್ರ-ರಾಜ್ಯ ಸರಕಾರದ ವಿರುದ್ಧ ಸಿಡಿದೆದ್ದ ಕಡಲಮಕ್ಕಳು
ಉಡುಪಿ: ಮೀನುಗಾರರು ಯಾವುದೇ ರಾಜಕೀಯ ಪಕ್ಷದ ಕೈಗೊಂಬೆಯಲ್ಲ. ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆ ಸರಿಯಲ್ಲ ಎಂದು ಮೀನುಗಾರ ಮುಖಂಡ ಜಿ. ಶಂಕರ್ ಆಕ್ರೋಶ ವ್ಯಕ್ತಪಡಿಸಿದರು. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಏಳು ಮಂದಿ ಮೀನುಗಾರರ ನಾಪತ್ತೆ ಪ್ರಕರಣವನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸಿ ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ […]
ನಾಪತ್ತೆಯಾದ 7 ಮಂದಿ ಮೀನುಗಾರರನ್ನು ಪತ್ತೆ ಹಚ್ಚಲು ಆಗ್ರಹಿಸಿ ;ಉಡುಪಿಯಲ್ಲಿ ಬೃಹತ್ ಪ್ರತಿಭಟನೆ
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 7 ಮಂದಿ ಮೀನುಗಾರರು ಕಣ್ಮರೆಯಾಗಿ 23 ದಿನಗಳು ಕಳೆದಿವೆ.ನಾಪತ್ತೆಯಾಗಿರುವ 7 ಮಂದಿ ಮೀನುಗಾರರ ಶೀಘ್ರ ಪತ್ತೆಗೆ ಆಗ್ರಹಿಸಿ ಸಾವಿರಾರು ಮೀನುಗಾರರು ಕಡಲಿಗಿಳಿಯದೆ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಅಂಗವಾಗಿ ಮಲ್ಪೆಯಿಂದ ಕಾಲ್ನಡಿಗೆಯ ಜಾಥಾಕ್ಕೆ ಮೊಗವೀರ ಮುಖಂಡ ಜಿ .ಶಂಕರ್ ಚಾಲನೆ ನೀಡಿದರು. ಮಲ್ಪೆ ಬಂದರಿನಿಂದ ಹೊರಟ ಸಾವಿರಾರು ಮೀನುಗಾರರು ಕರಾವಳಿ ಬೈಪಾಸ್ನಲ್ಲಿ ತಿರುಗಿ ಮೇಲ್ಸೇತುವೆ ಮೂಲಕ ಅಂಬಲಪಾಡಿ ಬೈಪಾಸ್ಗೆ ಬಂದು ರಾಸ್ತಾ ರೋಕೋ […]