ಮಂಗಳೂರು: ಸ೦ತ ಅಲೋಶಿಯಸ್ ಸ್ವಾಯತ್ತ ಕಾಲೇಜಿಗೆ ಪರಿಗಣಿತ ವಿಶ್ವವಿದ್ಯಾನಿಲಯ ಸ್ಥಾನಮಾನ
ಮಂಗಳೂರು: ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯದ ಜನವರಿ 25-2024 ರ ಅಧಿಸೂಚನೆ ಸಂಖ್ಯೆ 9-27/2017-0,3 (1) ಪ್ರಕಾರ ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜನ್ನು ಪರಿಗಣಿತ ವಿಶ್ವವಿದ್ಯಾನಿಲಯವೆಂದು ಘೋಷಿಸಲಾಗಿದೆ ಎಂದು ಕಾಲೇಜಿನ ಪ್ರಾಶುಂಪಾಲ ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ ತಿಳಿಸಿದ್ದಾರೆ. ಮಂಗಳೂರಿನ ಪ್ರಸಿದ್ದ ಸ೦ತ ಅಲೋಶಿಯಸ್ ಕಾಲೇಜಿನ (ಸ್ವಾಯತ್ತ) ವಿಶ್ವವಿದ್ಯಾನಿಲಯದ ಸ್ಥಾನಮಾನದ ಪ್ರಸ್ತಾವನೆಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ಅನುಮೋದಿಸಿದೆ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯದ ಸ್ಥಾನಮಾನವನ್ನು ನೀಡಿದೆ. ಈ ಸ್ಥಾನಮಾನದೊಂದಿಗೆ […]
ಮಂಗಳೂರು: ನ.27 ರಂದು ಎಂಸಿಸಿ ಬ್ಯಾಂಕ್ ಶತಮಾನೋತ್ತರ ದಶಮಾನ ಸಂಭ್ರಮಾಚರಣೆ
ಮಂಗಳೂರು: ಅವಿಭಜಿತ ದ.ಕ ಜಿಲ್ಲೆಯಲ್ಲಿ ಸುಸಜ್ಜಿತ 16 ಶಾಖೆಗಳನ್ನು ಹೊಂದಿರುವ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ದಾಖಲೆಯ 1.60% ಎನ್.ಪಿ.ಎ ಹಾಗೂ 8.27 ಕೋಟಿ ಲಾಭ ಗಳಿಸಿರುವ ಕರಾವಳಿಯ ಮುಂಚೂಣಿಯ ಸಹಕಾರಿ ಲಿಮಿಟೆಡ್ ಬ್ಯಾಂಕ್ ಗಳಲ್ಲಿ ಒಂದಾಗಿರುವ ಎಂಸಿಸಿ ಬ್ಯಾಂಕ್ ತನ್ನ ಶತಮಾನೋತ್ತರ ದಶಮಾನದ ಸಂಭ್ರಮದಲ್ಲಿದೆ. ನ.27 ಭಾನುವಾರದಂದು ನಗರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ಬ್ಯಾಂಕ್ ತನ್ನ ಶತಮಾನೋತ್ತರ ದಶಮಾನ ಸಂಭ್ರಮವನ್ನು ಆಚರಿಸುತ್ತಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೋ ತಿಳಿಸಿದರು. ಅವರು ಗುರುವಾರದಂದು ಬ್ಯಾಂಕಿನ ಮಂಗಳೂರಿನ ಆಡಳಿತ […]
ಮಂಗಳೂರು: ನೆಹರೂ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ; ಸಾಧಕರಿಗೆ ಸನ್ಮಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಧ್ವಜಾರೋಹಣ ಮಾಡಿದರು. ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಪ್ರಭಾರಿ ಜಿಲ್ಲಾಧಿಕಾರಿ ಆರ್.ಕುಮಾರ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಶಾಸಕರಾದ ವೇದವ್ಯಾಸ್ ಕಾಮತ್, ಡಾ. ವೈ ಭರತ್ ಶೆಟ್ಟಿ, ಉಮಾನಾಥ್ […]
ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ದೀಪಾವಳಿ ಆಚರಣೆ
ಮಂಗಳೂರು: ‘ಕತ್ತಲೆಯಿಂದ ಬೆಳಕಿನಕಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ಸಾಗುವುದೇ ದೀಪಾವಳಿಯ ವಿಶೇಷ. ಆ ಮೂಲಕ ನಮ್ಮಲ್ಲಿ ಪ್ರೀತಿ, ವಿಶ್ವಾಸ ಸೌಹಾರ್ದ ಬೆಳೆಯಬೇಕು. ದೀಪಾವಳಿಯು ಎಲ್ಲರ ಜೀವನದಲ್ಲಿ ಬೆಳಕನ್ನು ತರಲಿ ಎಂದು ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಮಾತಾನಂದಮಯಿ ಹೇಳಿದರು. ಅವರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಆಶ್ರಯದಲ್ಲಿಎಕ್ಸ್ಪೋಡಿಯಂ ಸಭಾಂಗಣದಲ್ಲಿ ನಡೆದ ದೀಪಾವಳಿ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೀಪಾವಳಿಯ ಸಂಭ್ರಮದಲ್ಲಿ ವಿದ್ಯಾರ್ಥಿಗಳು ಆಧ್ಯಾತ್ಮಿಕ ದೃಷ್ಟಿಕೋನದ ಹಿನ್ನೆಲೆಯಲ್ಲಿ ಲೌಕಿಕ ಮತ್ತು ಅಲೌಕಿಕ ಭಾವವನ್ನು […]
ಮೌಲಾನ ಆಜಾದ್ ಮಾದರಿ ಶಾಲೆ: ಅತಿಥಿ ಶಿಕ್ಷಕರ ನೇಮಕಾತಿ
ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಶಾಲೆಗೆ 2022-23ನೇ ಸಾಲಿಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲ್ಲಾಪು ಪಟ್ಲದ ಮೌಲಾನಾ ಆಜಾದ್ ಮಾದರಿ ಶಾಲೆಗೆ ವಿಜ್ಞಾನ ಮತ್ತು ಗಣಿತ ಶಿಕ್ಷಕರು ಹಾಗೂ ಉಳಾಯಿಬೆಟ್ಟು ಮೌಲಾನಾ ಆಜಾದ್ ಮಾದರಿ ಶಾಲೆಗೆ ಕನ್ನಡ ಮತ್ತು ವಿಜ್ಞಾನ ಶಿಕ್ಷಕರ ಅವಶ್ಯಕತೆ ಇರುವುದರಿಂದ ಸದರಿ ವಿಷಯಗಳಲ್ಲಿ ಬಿ.ಎ/ ಬಿ.ಎಡ್, ಬಿ.ಎಸ್ಸಿ/ ಬಿ.ಎಡ್ (ಪಿಸಿಎಂ/ಸಿಬಿ.ಝಡ್) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಬಯೋಡಾಟಾ ವನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ […]