ಮಂಚಿಕೆರೆ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ
ಮಣಿಪಾಲ: ಮನೆಯ ಬಾಗಿಲು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ 80 ಬಡಗಬೆಟ್ಟು ಗ್ರಾಮದ ಮಂಚಿಕೆರೆ ಎಂಬಲ್ಲಿ ನಡೆದಿದೆ. ಮಂಚಿಕೆರೆ ನಾಗಬನ ಬಳಿಯ ಅಶ್ವಿನ್ ಕುಮಾರ್ ಎಂಬವರ ಮನೆಯಲ್ಲಿ ಅ.1ರ ಬೆಳಿಗ್ಗೆ 10.30ರಿಂದ ರಾತ್ರಿ 8.45 ರ ಮಧ್ಯಾವಧಿಯಲ್ಲಿ ಕಳ್ಳತನ ನಡೆದಿದೆ. ಮನೆಯ ಹಾಲಿನ ಹಿಂಭಾಗದ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು, ಮಾಸ್ಟರ್ ಬೆಡ್ ರೂಮ್ ನಲ್ಲಿನ ಗೋದ್ರೇಜ್ ನಲ್ಲಿಟ್ಟಿದ್ದ 72 ಗ್ರಾಂ ತೂಕದ ಹವಳದ ಬಂಗಾರದ ಸರ, […]