ಮಂಚಿಕೆರೆ: ಭೂಮಿ ಬಿರುಕುಬಿಟ್ಟ ಸ್ಥಳದಲ್ಲಿ ಅಧಿಕಾರಿಗಳಿಂದ ಪರಿಶೀಲನೆ

ಉಡುಪಿ:  ಐದು ವರ್ಷಗಳ ಹಿಂದೆ ಬಡಗುಬೆಟ್ಟು ಗ್ರಾಪಂ ವ್ಯಾಪ್ತಿಯ ಮಣಿಪಾಲ–ಅಲೆವೂರು ರಸ್ತೆಯ ಮಂಚಿಕೆರೆ ಎಂಬಲ್ಲಿರುವ ನಾಗಬ್ರಹ್ಮಸ್ಥಾನದ ಎದುರಿನ ಎರಡನೇ ಅಡ್ಡರಸ್ತೆಯ ಭೂಮಿಯಲ್ಲಿ ಕಾಣಿಸಿಕೊಂಡಿದ್ದ ಬಿರುಕು ಇದೀಗ ಹಿಗ್ಗಿದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಬುಧವಾರ ಸ್ಥಳಕ್ಕೆ ಭೇಟಿ ನೀಡಿ, ಬಿರುಕು ಬಿಟ್ಟಿರುವ ಸ್ಥಳಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಾನ್‌ಜಿ ನಾಯ್ಕ್‌ ನೇತೃತ್ವದಲ್ಲಿ ಭೂ ವಿಜ್ಞಾನಿಗಳಾದ ಮಹೇಶ್‌, ಡಾ. ಮಹದೇಶ್ವರ, ಗೌತಮ್‌ ಶಾಸ್ತ್ರಿ, ಸಂಧ್ಯಾ, […]