ನ.6 ರಂದು ಮಂದಾರ್ತಿ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಶ್ರೀ ದುರ್ಗಾ ಸಹಕಾರ ಸೌಧದ ಉದ್ಘಾಟನಾ ಸಮಾರಂಭ

ಮಂದಾರ್ತಿ: ಮಂದಾರ್ತಿ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಶ್ರೀ ದುರ್ಗಾ ಸಹಕಾರ ಸೌಧದ ಉದ್ಘಾಟನಾ ಸಮಾರಂಭವು ನ.6 ರಂದು ಬೆಳಿಗ್ಗೆ 10.30 ಕ್ಕೆ ಮಂದಾರ್ತಿ ರಥಬೀದಿಯಲ್ಲಿ ನಡೆಯಲಿರುವುದು. ಮಂದಾರ್ತಿ ಸೇವಾ ಸಹಕಾರಿ ಸಂಘವು ಕಳೆದ 98 ವರ್ಷಗಳಿಂದ ಸಹಕಾರಿ ಕ್ಷೇತ್ರಗಳ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಾ ಬಂದಿದ್ದು, ಸರಕಾರದ ಸವಲತ್ತುಗಳನ್ನು ಸದಸ್ಯರಿಗೆ ತಲುಪಿಸಿ ಅಭಿವೃದ್ದಿ ಪಥದಲ್ಲಿ ಮುನ್ನೆಡೆಯುತ್ತಿದೆ. ಸೇವೆಯನ್ನು ಆಧುನೀಕರಣಗೊಳಿಸುವ ಸಲುವಾಗಿ ಮಾಂದಾರ್ತಿಯ ಹೃದಯ ಭಾಗದಲ್ಲಿ ಸಂಪೂರ್ಣ ಹವಾನಿಯಂತ್ರಿತ ನೂತನ ಕಚೇರಿಯನ್ನು ನಿರ್ಮಾಣ ಮಾಡಲಾಗಿದ್ದು, […]